ರಾಜ್ಯ ಸರಕಾರ ಕಂಬಳಕ್ಕೆ ಪ್ರೋತ್ಸಾಹಧನ ನೀಡುವ ಭರವಸೆ ನೀಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2023-24ನೇ ಸಾಲಿನ ಕಂಬಳದ ವಿವರಣೆ ನೀಡುವಂತೆ ಕಂಬಳ ಸಮಿತಿಗೆ ಸರಕಾರ ನಿರ್ದೇಶಿಸಿದೆ. ಬೆಂಗಳೂರು ಹೊರತುಪಡಿಸಿ ಒಟ್ಟು 23 ಕಂಬಳಗಳು ನಡೆದಿವೆ. ಈ ಕುರಿತ ಮಃಇತಿ ಕನ್ನಡ ಮತ್ತು ಸಂಸ್ಕೃತಿ ಇಲಖೆ ಮೂಲಕ ಸಂಗ್ರಹಿಸಿ ಸರಕಾರಕ್ಕೆ ಕಳುಹಿಸಿ ಕೊಡಲಾಗಿದೆ. ಹೀಗಾಗಿ ಶೀಘ್ರದಲ್ಲೇ ಕಂಬಳ ಪ್ರೋತ್ಸಾಹ ಧನ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ನವೆಂಬರ್‌ನಲ್ಲಿ ಪಿಲಿಕುಳದಲ್ಲಿ ಪಿಲಿಕುಳೋತ್ಸವ ನಡೆಯಲಿದೆ. ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಈ ಸಂಬಂಧ ಇಂದು ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕಂಬಳ ಸಮಿತಿ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿದೆ. ರಾಜ್ಯಮಟ್ಟದ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.