ನ.8ರಂದು ಕನಕದಾಸರ ಜಯಂತಿ ಕುಂಭ ಕಲಶ ಮೆರವಣಿಗೆ

0
121

ಉಡುಪಿ: ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ, ಪರ್ಯಾಯ ಶ್ರೀ ಪುತ್ತಿಗೆ ಮಠ , ಕೃಷ್ಣ ಮಠದ ಸಂಯುಕ್ತ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ನಡೆಯಲಿದೆ ಎಂದು ಸೇವಾ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್​. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಿಗ್ಗೆ 10ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ್​ ಪಾರ್ಕ್​ ನಲ್ಲಿ ಕನಕದಾಸರ ಜಯಂತಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್​ ಚಾಲನೆ ನೀಡಲಿದ್ದಾರೆ. ಬಳಿಕ ಮೆರವಣಿಗೆ ಜೋಡುಕಟ್ಟೆಯಿಂದ ಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬರಲಿದೆ ಎಂದರು.
ಮಧ್ಯಾಹ್ನ 1 ಗಂಟೆಗೆ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತಿರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ರಾಜಾಂಗಣದಲ್ಲಿ ನಡೆಯುವ ಸಭಾಕಾರ್ಯಕ್ರಮವನ್ನು ಶಾಸಕ ಯಶ್​ ಪಾಲ್​ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನಕದಾಸ ಸಮಾಜ ಸೇವಾ ಸಂಘದ ಹನುಮಂತ ಎಸ್​. ಡೊಳ್ಳಿನ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಉದ್ಯಮಿ ಕೆ. ಕೃಷ್ಣ್ಣಮೂರ್ತಿ ಆಚಾರ್ಯ ಅವರಿಗೆ ಭಕ್ತ ಕನಕ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಎಸ್​. ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಬ. ಆಸಂಗಿ, ಜೊತೆ ಕಾರ್ಯದರ್ಶಿ ದೇವು ಎಸ್​. ಪೂಜಾರ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಮಹಾಂತೇಶ್​ ಕಾಟಾಪುರ, ಸಲಹೆಗಾರರಾದ ಮುತ್ತಪ್ಪ ಕುರಿ, ಬಸವರಾಜ ಕುರುಬ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here