ಯಂಗ್ ಬ್ರಿಗೇಡ್ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಕಳದ ಕನಿಷ್ಕ್ ಹೆಗ್ಡೆ ನೇಮಕ

0
11

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್‌ನ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕಾತಿ ನಡೆದಿದ್ದು, ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರು ನಿವಾಸಿ ಕನಿಷ್ಕ್ ಹೆಗ್ಡೆ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಯಂಗ್ ಬ್ರಿಗೇಡ್‌ನ ರಾಜ್ಯಾಧ್ಯಕ್ಷರಾದ ಜುನೈದ್ ಪಿ.ಕೆ ಅವರು ಈ ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ಸಂಘಟನೆಯನ್ನು ರಾಜ್ಯಾದ್ಯಂತ ಬಲಪಡಿಸುವ ಮತ್ತು ಯುವ ಶಕ್ತಿಯನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿಯನ್ನು ಕನಿಷ್ಕ್ ಹೆಗ್ಡೆ ಅವರಿಗೆ ವಹಿಸಲಾಗಿದೆ.

ತಮ್ಮ ನೇಮಕಾತಿಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕನಿಷ್ಕ್ ಹೆಗ್ಡೆ ಅವರು, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಮತ್ತು ರಾಜ್ಯ ನಾಯಕರ ನಂಬಿಕೆಗೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಯುವ ಬ್ರಿಗೇಡ್ ಅನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುತ್ತೇನೆ,” ಎಂದು ತಿಳಿಸಿದ್ದಾರೆ.

ಈ ನೂತನ ನೇಮಕಾತಿಗೆ ಜಿಲ್ಲೆಯ ಹಾಗೂ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಶುಭಾಶಯಗಳನ್ನು ಕೋರಿದ್ದಾರೆ.

LEAVE A REPLY

Please enter your comment!
Please enter your name here