ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡದ ನವ ಕವಯತ್ರಿ ರಮ್ಯ ರಘುಪತಿ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ “ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ.
ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಈ ವಿಷಯವನ್ನು ತಿಳಿಸಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಪ್ರತಿಭೆ ಹಾಗೂ ಕೊಡುಗೆಯನ್ನು ಗುರುತಿಸಿ ರಮ್ಯ ರಘುಪತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರ ಈ ಸಾಧನೆಗೆ ಸಾಹಿತ್ಯ ವಲಯ ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

