ರಂಗ ನಿರ್ದೇಶಕ ಎ. ಚಂದ್ರಶೇಖರ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

0
25

ಕೋಲಾರ : ಕೋಲಾರದ ರಂಗ ನಿರ್ದೇಶಕ ಹಾಗೂ ಸಿನಿಮಾ ನಟ ಎ. ಚಂದ್ರಶೇಖರ ಅವರನ್ನು ಕನ್ನಡ ಭವನದ ಪ್ರತಿಷ್ಠಿತ **ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026″**ಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಕಲಾ ಸಾಧನೆಯನ್ನು ಪರಿಗಣಿಸಿ ಎ. ಚಂದ್ರಶೇಖರ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ಎ. ಚಂದ್ರಶೇಖರ ಅವರಿಗೆ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಪ್ರದಾನ ಮಾಡಲಾಗುವುದು.