ಕೊಪ್ಪಳ : ಕೊಪ್ಪಳ ಜಿಲ್ಲೆಯ ಶ್ರೇಷ್ಠ ಸಾಹಿತಿಗಳಾದ ಶ್ರೀ ಮಹೇಶ್ ಮನ್ನಾಪುರ ಹಾಗೂ ಶ್ರೀಮತಿ ಅನ್ನಪೂರ್ಣ ಮನ್ನಾಪುರ ದಂಪತಿ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ “ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ.
ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ಕೃತಿರಚನೆ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಮಹೇಶ್ ಮನ್ನಾಪುರ–ಅನ್ನಪೂರ್ಣ ದಂಪತಿ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಸಾಧನೆಗೆ ಸಾಹಿತ್ಯ ವಲಯದ ಗಣ್ಯರು, ಕನ್ನಡಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದು, ಜುಲೈ 26ರಂದು ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

