ಮಂಡ್ಯದ ಕವಯತ್ರಿ ಸುಮನ ರಾವ್‌ಗೆ ‘ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ ಅಚೀವ್ಮೆಂಟ್ ಅವಾರ್ಡ್–2026’

0
5

ಕಾಸರಗೋಡು : ಮಂಡ್ಯ ಜಿಲ್ಲೆಯ ಜನಪ್ರಿಯ ಕವಯತ್ರಿ, ಆದರ್ಶ ಶಿಕ್ಷಕಿ ಹಾಗೂ ಗುರುಕುಲ ಪ್ರತಿಷ್ಠಾನದ ಮಂಡ್ಯ ಜಿಲ್ಲಾಧ್ಯಕ್ಷೆ ಶ್ರೀಮತಿ ಸುಮನ ರಾವ್ ಅವರಿಗೆ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ.

ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ನೀಡಲಾಗುವ ಈ ಅಂತರ್‌ರಾಜ್ಯ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಸುಮನ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ.

ಜುಲೈ 26, 2026ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ **‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’**ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here