ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ, ಕನ್ನಡ ಭವನ ಸಾರ್ವಜನಿಕ ವಾಚನಾಲಯ ರೂವಾರಿಗಳಾದ ಶ್ರೀ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಇವರೀಗೆ, ಆದರ್ಶ ಕನ್ನಡ ದಂಪತಿಗಳು ಪರಿಗಣನೆಯಲ್ಲಿ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ ” ಇದೇ ಬರುವ 3.11.2024.ಭಾನುವಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಹಾಗೂ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ.)ವಿಜಯನಗರ ಬಳ್ಳಾರಿ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನ ಮೈಸೂರ್ ಸಭಾ ಭವನದಲ್ಲಿ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಶ್ರೀ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಇವರೀಗೆ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ “ನೀಡಿ ಗೌರವಿಸಲಾಗುವುದು.
ಕಳೆದ 24ವರ್ಷಗಳಿಂದ ಕನ್ನಡ ಭವನ ಗ್ರಂಥಾಲಯ, ಪ್ರಸ್ಥಾನವನ್ನು ವಿದ್ಯುಕ್ತವಾಗಿ ಆರಂಭಗೊಳಿಸಿ, ಸಾಹಿತ್ಯ, ಕಲೆ, ಧಾರ್ಮಿಕತೆ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ, ಮಾಡುತ್ತಿರುವ ಹಾಗೂ ವೈವಿದ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಿ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ, ನೆಲೆಯೂರಿಸುವ ಕಾಯಕದಲ್ಲಿ ಅವಿರತ ದುಡಿಯುತ್ತಿರುವ ಇವರೀಗೆ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ “ಇನ್ನೂ ಹೆಚ್ಚಿನ ಹುರುಪನ್ನು ನೀಡಲಿ ಎಂದು ಶ್ರೀ ಸುಜ್ಞಾನ ವಿದ್ಯಾಪೀಠ ಅಧ್ಯಕ್ಷರಾಧ ಡಾ ನಾಗರಾಜ ತಮಬ್ರಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ ಎಂದು ಕನ್ನಡ ಭವನದ ಅಧ್ಯಕ್ಷರಾಧ ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.
ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ದಂಪತಿಗೆ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ “
RELATED ARTICLES