ಕಿನ್ನಿಗೋಳಿ ಯುಗಪುರುಷ ಸಂಸ್ಥೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

0
25

ಕಿನ್ನಿಗೋಳಿ : ಕನ್ನಡ ರಾಜ್ಯೋತ್ಸವದ ಸುಸಂದರ್ಭ ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಪುರಸ್ಕೃತ “ಯುಗಪುರುಷ” ಸಂಸ್ಥೆಯ ನೇತೃತ್ವದಲ್ಲಿ ವಾಯ್ಸ್ ಆಫ್ ಆರಾಧನ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1ರಂದು ಬೆಳಿಗ್ಗೆ ಗಂಟೆ 10ರಿಂದ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜರಗಲಿದೆ.

“ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ನಮ್ಮ ಪಾತ್ರ ಈ ವಿಷಯದಲ್ಲಿ ಡಾ ಸೋಂದಾ ಭಾಸ್ಕರ ಭಟ್ ಇವರು ಉಪನ್ಯಾಸ ನೀಡಲಿರುವರು. ಪುನರೂರು ಪ್ರತಿಷ್ಠಾನದ ಅಧ್ಯಕ್ಷರಾದ ದೇವಪ್ರಸಾದ್ ಪುನರೂರು, ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಈಶ್ವರ್ ಕಟೀಲ್, ಅಗರಿ ಎಂಟರ್‌ಪ್ರೈಸಸ್‌ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಕರ್ನಾಟಕ ಜಾನಪದ ಪರಿಷತ್ತಿನ ಮೂಡುಬಿದ್ರೆ ತಾಲೂಕು ಘಟಕದ ಅಧ್ಯಕ್ಷೆ ಪದ್ಮಶ್ರೀ ಭಟ್, ಯಕ್ಷಲಹರಿಯ ಅಧ್ಯಕ್ಷ ರಘುನಾಥ ಕಾಮತ್, ಮೂಲ್ಕಿ ಹೋಬಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜೊಸ್ಸಿ ಪಿಂಟೋ, ನಿವೃತ್ತ ಪ್ರಾಂಶುಪಾಲರಾದ ವೈ. ಎನ್. ಸಾಲ್ಯಾನ್ ಇವರು ಉಪಸ್ಥಿತರಿರುವರು. ಅಂತರಾಷ್ಟ್ರೀಯ ಪವರ್‌ಲಿಫ್ಟರ್‌ಗಳಾದ ಕು. ಸಾತ್ವಿ ಸಾಲ್ಯಾನ್ ಹಾಗೂ ಜಯಲಕ್ಷ್ಮೀ ಆಚಾರ್ಯ ಇವರನ್ನು ಗೌರವಿಸಲಾಗುವುದು.

ವಾಯ್ಸ್ ಆಫ್ ಆರಾಧನಾ ತಂಡದವರಿಂದ ಕನ್ನಡ ರಾಜ್ಯೋತ್ಸವ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ಜರಗಲಿದೆಯೆಂದು ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.