ಕನ್ನಡದ ನಡಿಗೆ ಶಾಲೆಯ ಕಡೆಗೆ’ ಅಭಿಯಾನ
ಡಾ. ಪುರುಷೋತ್ತಮ ಬಿಳಿಮಲೆ ಅವರಿಂದ ಚಾಲನೆ ಜೂ.14ರಂದು

0
123

ದೇಲಂಪಾಡಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಕಾಸರಗೋಡು ಜಿಲ್ಲೆಯ ಸುಮಾರು 20 ಶಾಲೆಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ರಚನಾ ತರಬೇತಿ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಯೋಜನೆಯ ಲೋಕಾರ್ಪಣೆಯು ಇದೇ ಜೂನ್ 14ರಂದು ಬೆಳಗ್ಗೆ 10 ಗಂಟೆಗೆ ದೇಲಂಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ. ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕನ್ನಡ ಧ್ವಜವನ್ನು ಪರಿಷತ್ತಿನ ಸ್ಥಾಪಕ ಸಂಚಾಲಕ ಡಾ. ಕೆ ವಾಮನ್ ರಾವ್ ಬೇಕಲ್ ಹಾಗೂ ಪರಿಷತ್ತಿನ ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಅವರಿಗೆ ಹಸ್ತಾಂತರಿಸಿ ಚಾಲನೆ ನೀಡಲಿದ್ದಾರೆ. ಈ ಯೋಜನೆಯಂತೆ ಕಾಸರಗೋಡು ಜಿಲ್ಲೆಯ ಆಯ್ದ ಶಾಲೆಗಳಲ್ಲಿ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವ ಏಕದಿನ ಶಿಬಿರ ಹಾಗೂ ಚಿತ್ರ ರಚನಾ ಕಾರ್ಯಾಗಾರಗಳು ಈ ಶೈಕ್ಷಣಿಕ ಅವಧಿಯಲ್ಲಿ ನಡೆಯಲಿವೆ.

LEAVE A REPLY

Please enter your comment!
Please enter your name here