ಕನ್ಯಾಡಿ: ಸಂಪನ್ನಗೊಂಡ ಉಚಿತ 33ನೇ ಟೈಲರಿಂಗ್ ತರಬೇತಿ ಶಿಬಿರ

0
7

ಬೆಳ್ತಂಗಡಿ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆ. 2ರಂದು ರಾಣೆಯರ್ ಸಭಾಭವನ ತುಂಬೆತಡ್ಕದಲ್ಲಿ ನಡೆಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಎಂ.ಎಸ್‌ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಖಜಾಂಚಿ ಮತ್ತು ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ರವರು ಮಾತನಾಡಿ ಯಾವುದೇ ವಿದ್ಯೆಯಾದರು ನಮಗೆ ಅದು ಎಂದಿಗೂ ಶಾಶ್ವತ. ಮಹಿಳೆಯರು ಯಾವ ವಿಷಯದಲ್ಲೂ ಹಿಂದುಳಿಯದೆ ಸ್ವಾವಲಂಬಿ ಜೀವನವನ್ನು ಮಾಡುತ್ತ ಮುನ್ನಡೆಯುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಪ್ರತಿಮಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ನಮ್ಮ ಸಂಸ್ಥೆಯ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಪ್ರತಿಮಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಅರಸಿನಮಕ್ಕಿ, ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ನೀತಾ ರಾಧೇಶ್ ಆಚಾರ್ಯರವರು ಸೇವಾಭಾರತಿ ಸಂಸ್ಥೆಯ ಜೊತೆ ಕೈ ಜೋಡಿಸಿ ಅರಸಿನಮಕ್ಕಿ, ನೆಲ್ಯಡ್ಕ ಹಾಗೂ ತುಂಬೆತಡ್ಕದಲ್ಲಿ ಸತತ 3 ಶಿಬಿರದ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು 91 ಮಂದಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಕಾರಣಿಕರ್ತರಾಗಿದ್ದಾರೆ ಇವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು

ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ನಿರ್ದೇಶಕರಾದ ಬೇಬಿ, ಬೆಳ್ತಂಗಡಿ LIC of INDIA, Developement Officer ಉದಯಶಂಕರ್ ಕೆ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ನಿವೃತ್ತ ಯೋಧರು ಕೆ. ಮಹಾಬಲ ತುಂಬೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 31 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವೇದಾವತಿ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಆಶಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here