ಕಾಪು: ಉಡುಪಿ ಕಲ್ಸಂಕ ಆಟೋ ರಿಕ್ಷಾ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ರಿಕ್ಷಾ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪಳ್ಳಿಗುಡ್ಡೆ ಕೋಟೆ ನಿವಾಸಿ ದೀಪಕ್ ಆರ್. (34) ಆತ್ಮಹತ್ಯೆಗೆ ಶರಣಾದ ರಿಕ್ಷಾ ಚಾಲಕ. ಅವಿವಾಹಿತನಾಗಿರುವ ದೀಪಕ್ ಆರ್. ಮದ್ಯ ಸೇವನೆ ಚಟವನ್ನು ಹೊಂದಿದ್ದು, ಜ. 1ರಂದು ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ತಾಯಿ ಕೋಣೆಗೆ ಹೋಗಿ ನೋಡಿದಾಗ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಲಾಗಿತ್ತು.
ಬಳಿಕ ನೆರೆಹೊರೆಯವರು ಸೇರಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ದೀಪಕ್ ಕೋಣೆಯಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.