Saturday, June 14, 2025
Homeಕಾಪುಕಾಪು: ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು..!!

ಕಾಪು: ಕೋವಿಡ್ ಪಾಸಿಟಿವ್ ವ್ಯಕ್ತಿ ಸಾವು..!!

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ ಪೀಟರ್ ಮಥಾಯಸ್ (65) ಎಂಬುವವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್ ಇಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಮನೆಯವರ್ಯಾರಿಗು ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದು, ಬುಧವಾರ ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಲು ತಹಶೀಲ್ದಾರ್ ಸೂಚಿಸಿದ್ದಾರೆ.
ಪೀಟರ್ ಮಥಾಯಸ್‌ರವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ಮೇ 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೊರೋನ ದೃಢಪಟ್ಟಿರುತ್ತದೆ. ಸೋಮವಾರ ಅವರು ಮೃತ ಪಟ್ಟಿದ್ದಾರೆ.

ತಹಶೀಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೋನ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ. ತಾಲ್ಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

RELATED ARTICLES
- Advertisment -
Google search engine

Most Popular