ಕಾಪು ಮಂಡಲ ಬಿಜೆಪಿ ಇದರ ಮಹಿಳಾ ಮೋರ್ಚಾದ ಪದಗ್ರಹಣ ಸಮಾರಂಭ ಇಂದು (23-03-2024) ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳೆ ಶುಭಹಾರೈಸಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ನಾವು ನಿವೆಲ್ಲರು ಕಾರ್ಯ ಪ್ರವರ್ಥರಾಗೋಣ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಂಧ್ಯಾ ರಮೇಶ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಪವಿತ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಪಕ್ಷದ ಹಿರಿಯರಾದ ಶೀಲಾ ಕೆ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಪ್ರಭಾ, ಸಂಧ್ಯಾ ಕಾಮತ್ ಉಪಸ್ಥಿತರಿದ್ದರು.