ಜೂನ್ 03 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬಂಧ ಇಂದು ದಿನಾಂಕ 25-05-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾಗಿರುವ ಭೋಜೇಗೌಡ ಅವರು ಕಾಪು ಮಂಡಲ ಬಿಜೆಪಿ ಕಚೇರಿ ಭೇಟಿ ನೀಡಿ ಘಟನಾಯಕರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಾತ್ಯತೀತ ಜನತಾ ದಳ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.