ಕಾಪು: ಕಾಪು ಹೊಸ ಮಾರಿಗುಡಿ ದೇವಸ್ಥಾನದ ದೇವಿ ಮಾರಿಯಮ್ಮನ ಸನ್ನಿದಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಲೋಕಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ಧಿಗಾಗಿ ಆಯೋಜಿಸಲಾಗಿದೆ. ಅ.20ರಿಂದ ಅ.28ರವರೆಗೆ ನವದಿನಗಳ ಪರ್ಯಂತ ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನೊಳಗೊಂಡ 108 ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಮತ್ತು ಅ.26ರಂದು ಶನಿವಾರ ಸಂಜೆ 6 ಗಂಟೆಯಿಂದ ಆಹ್ವಾನಿತ ತಂಡಗಳ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದೆ. ಅ. 29ರಂದು ವಾಗೀಶ್ವರಿ ಪೂಜೆಯ ಮೂಲಕ ನವದುರ್ಗಾ ಲೇಖನ ಯಜ್ಞದ ಪುಸ್ತಕ ಬಿಡುಗಡೆಯಾಗಲಿದೆ.