ಕಾಪು: ಎಸ್‌ಡಿಪಿಐ ಬೆಂಬಲಿತ ಕಾಪು ಪುರಸಭೆ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್‌ರವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಬಿಜೆಪಿ ಧ್ವಜ ನೀಡಿ, ಎಸ್‌ಡಿಪಿಐ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕೋಶಾಧಿಕಾರಿ ಮನೋಹರ್ ಕಲ್ಮಾಡಿ, ಕಾಪು ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆ ಸದಸ್ಯರುಗಳು, ಪಕ್ಷದ ಹಿರಿಯ ಮುಖಂಡು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.