ಕಾಪು: ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಹೃದಯಾಘಾತದಿಂದ ಇಂದು ನಿಧನರಾದರು. ಸಜ್ಜನ ರಾಜಕಾರಣಿ, ನಿಷ್ಠಾವಂತ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ವಿನಯ ಬಲ್ಲಾಳ್ ಐದು ಬಾರಿ ಗ್ರಾಮ ಪಂಚಾಯತ್ ಸದಸ್ಯರು, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಇವರು, ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಸಂತಾಪ ವ್ಯಕ್ತಪಡಿಸಿದ್ದಾರೆ.