ನಾಡು-ನುಡಿಯ ಸೇವೆಗೆ ಕರವೇ ಸ್ವಾಭಿಮಾನಿ ಸೇನೆ ಸನ್ನದ್ಧ : ಕುಶಾಲನಗರ ನಗರ ಘಟಕಕ್ಕೆ ನೂತನ ಸಾರಥಿಗಳ ನೇಮಕ

0
49

ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಶಿವು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಶಾಲನಗರ ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಕುಶಾಲನಗರ ನಗರ ಘಟಕದ ನೂತನ ಅಧ್ಯಕ್ಷರಾಗಿ ಪರಮೇಶ್ (ಮಂಡ್ಯ) ಹಾಗೂ ಗೌರವಾಧ್ಯಕ್ಷರಾಗಿ ವಿಲ್ಸನ್ ಜವಾಬ್ದಾರಿ ವಹಿಸಿಕೊಂಡರು. ಇದೇ ವೇಳೆ ಪರಮೇಶ್ ಹಾಗೂ ವಸಂತ್ ಅವರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಶಿವು ಅವರು ನಾಡು-ನುಡಿ ಹಾಗೂ ಸಮಾಜ ಸೇವೆಗಾಗಿ ಸಂಘಟನೆಗೆ ಬರುವ ಪ್ರತಿಯೊಬ್ಬರನ್ನೂ ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ತಿಳಿಸಿ, ಸ್ವಯಂಪ್ರೇರಿತರಾಗಿ ಬಂದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ ಮತ್ತು ಮತ್ತು ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಶಿವಣ್ಣ ಮತ್ತು ಜಿಲ್ಲಾ ಖಜಾಂಚಿ ಅಂತೋನಿ ಮತ್ತು ಜಿಲ್ಲಾ ಕಾರ್ಯದರ್ಶಿಗಳಾದ ಮಣಿಕಂಠ ಮತ್ತು ಕುಶಾಲನಗರ ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರು, ಮತ್ತು ತಾಲ್ಲೂಕು ಸಂಚಾಲಕ ವಿ.ಪಿ ಚಂದ್ರಶೇಖರ್ ಮತ್ತು ಜಿಲ್ಲಾ ಸಂಚಾಲಕ ಅಭಯ್ ಸಿಂಗ್ ಮತ್ತು ಕುಶಾಲನಗರ ಮಹಿಳಾ ಘಟಕದ ತಾಲ್ಲೂಕು ಉಪಾಧ್ಯಕ್ಷೆ ದಿವ್ಯ ಡಿಸೋಜ ಸೇರಿದಂತೆ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.