ಕಾರ್ಕಳ : ಆಗಸ್ಟ್ 26, 2025 ರಂದು ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಗೊಂಡಿದೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.