ಕಾರ್ಕಳ: ಮಾದಕ ದ್ರವ್ಯದ ಹಾವಳಿ ಕಾರ್ಕಳದಲ್ಲಿ ದಿನೇ ದಿನೇ ಹೆಚ್ಚುತ್ತಲಿದ್ದು ಕಾಲೇಜುಗಳ ಕೆಲವು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ದುಷ್ಚಟಕ್ಕೆ ಬಲಿ ಆಗಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತುವುದು ಕೂಡ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಭಿನವ ಭಾರತ ಕಾರ್ಕಳ ಇದರ ಸದಸ್ಯರು ಸೇರಿ ಮನವಿ ಪತ್ರ ಸಲ್ಲಿಸಿದರು.