ಕಾರ್ಕಳ : ನಕ್ಸಲ್ ನಿಗ್ರಹ ಪಡೆಯಲ್ಲಿ ಸೇವೆ – ಮಂಜುನಾಥ ದೇವರಮನೆ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

0
26

ಕಾರ್ಕಳ : ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಅಧಿಕಾರಿ/ಸಿಬ್ಬಂದಿಗಳಿಗೆ ನೀಡುವ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಕಾರ್ಕಳದಲ್ಲಿರುವ ನಕ್ಸಲ್ ನಿಗ್ರಹ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಆರ್.ಎಸ್‌.ಐ ಮಂಜುನಾಥ ದೇವರಮನೆ ಅವರು ಭಾಜನರಾಗಿದ್ದಾರೆ.

ನಕ್ಸಲ್ ನಿಗ್ರಹ ಪಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಗೌರವ ಲಭಿಸಿದೆ. ಪೊಲೀಸ್ ಇಲಾಖೆಯಲ್ಲಿ ಅವರು ತೋರಿದ ಸಮರ್ಪಣೆ, ಧೈರ್ಯ ಮತ್ತು ಕರ್ತವ್ಯನಿಷ್ಠೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿದೆ.

ಈ ಸಾಧನೆ ಕಾರ್ಕಳ ಪ್ರದೇಶಕ್ಕೆ ಹೆಮ್ಮೆ ತರುವಂತಹದ್ದಾಗಿದ್ದು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.


LEAVE A REPLY

Please enter your comment!
Please enter your name here