ಕಾರ್ಕಳ : ಅಂಬೇಡ್ಕರ್ ಭವನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

0
34

ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ಸುಮಾರು ಆರು ಕೋಟಿ ರೂ. ವೆಚ್ಚದಲ್ಲಿ ಭವ್ಯ ಹಾಗೂ ವಿನೂತನ ರೀತಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.

ಮುಖ್ಯಮಂತ್ರಿಗಳು ನೂತನ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು. ಬಳಿಕ ರಾಜ್ಯ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು ವಿವಿಧ ದಲಿತ ಸಂಘಟನೆಗಳು ಹಾಗೂ ದಲಿತರಿಂದ ನೀಡಲಾದ ಮನವಿಗಳನ್ನು ಸ್ವೀಕರಿಸಿ, ಅವರೊಂದಿಗೆ ಸಂವಾದ ನಡೆಸಿದರು. ಅವರ ಹಲವು ಬೇಡಿಕೆಗಳು ಹಾಗೂ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ ಆರ್. ಹೆಬ್ಬಾಳ್ಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಎಸ್ ಮಧು ಬಂಗಾರಪ್ಪ, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಸಚಿವ ಜೆ.ಪಿ.ಹೆಗ್ಡೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಲಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ.ವೀರಪ್ಪ ಮೊಯಿಲಿ , ಉದಯ್ ಶೆಟ್ಟಿ ಮುನಿಯಾಲು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here