ಸಚಿವ ಡಿ.ಸುಧಾಕರ್ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಸಂತಾಪ

0
2

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕರು, ರಾಜ್ಯ ಸರ್ಕಾರದ ಸಚಿವರಾಗಿದ್ದ ಸನ್ಮಾನ್ಯ ಡಿ. ಸುಧಾಕರ್ ಅವರ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಂತಾಪ ಸೂಚಿಸಿದ್ದಾರೆ.

ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಸನ್ಮಾನ್ಯ ಡಿ. ಸುಧಾಕರ್ ಅವರ ಅಗಲುವಿಕೆಯ ಸುದ್ದಿ ಅತ್ಯಂತ ದುಃಖ ತಂದಿದೆ.

ಸಾಮಾಜಿಕ ಕಳಕಳಿ, ಜನಪರ ಸೇವೆ ಹಾಗೂ ಸರಳ ವ್ಯಕ್ತಿತ್ವದ ಮೂಲಕ ಜನಮನ ಗೆದ್ದಿದ್ದ ಅವರು ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಅವರ ಅಗಲಿಕೆ ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು , ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here