ಕಾರ್ಕಳ: ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಗರದ ಸರ್ವಜ್ಞ ಸರ್ಕಲ್ ನಲ್ಲಿ ವಿವಿಧ ಸಂಘಟನೆಗಳು ಸೇರಿ ಪಂಜಿನ ಮೆರವಣಿಗೆ ನಡೆಸಿದ್ದಕ್ಕೆ ಪ್ರಕರಣ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅನುಮತಿ ಇಲ್ಲದೆ ಪಂಜಿನ ಮೆರವಣಿಗೆ ನಡೆಸಿದ್ದಕ್ಕೆ ಪ್ರಕರಣ ದಾಖಲಾಗಿದೆ. ಹರ್ಷಿತ್, ಶ್ರೇಯಸ್, ಗಣೇಶ್ ಈ ಸಭೆಯನ್ನುದ್ದೇಶಿಸಿ ಮಾತನಾಡಿದ್ದು, ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.