ಕಾರ್ಕಳ: ಹಿಂದೂ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಅನ್ಯಕೋಮಿನ ಯುವಕರಾದ ಅಲ್ತಾಫ್ ಮತ್ತು ಶ್ರಾವೆದ್ ರಿಚರ್ಡ್ ಕ್ವಾಡ್ರಸ್‌ನನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.
ಆರೋಪಿಗಳನ್ನು ಕಾರ್ಕಳ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನಗರ ಠಾಣೆ ಪೊಲೀಸರ ಮನವಿಯಂತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ತನಿಖೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳನ್ನು ಶನಿವಾರ ಸ್ಥಳಕ್ಕೆ ಕರೆದೊಯ್ದು ಮಹಜರು ಮಾಡಲಾಗಿದೆ. ಸ್ಥಳದಲ್ಲಿ ಬಿಯರ್ ಬಾಟಲಿ, ನೀರಿನ ಬಾಟಲಿ ಮತ್ತಿತರ ವಸ್ತುಗಳು ಕಂಡುಬಂದಿವೆ ಎನ್ನಲಾಗಿದೆ. ಆರೋಪಿಗಳು ಶುಕ್ರವಾರ ಯುವತಿಯೊಬ್ಬಳನ್ನು ಅಪಹರಿಸಿ ಮದ್ಯದಲ್ಲಿ ಮಾದಕ ವಸ್ತು ಸೇರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಳಿಕ ಆಕೆಯನ್ನು ಮನೆ ಪಕ್ಕ ಬಿಟ್ಟು ಹೋಗಿದ್ದರು. ಆದರೆ ಅಸ್ವಸ್ಥಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು.