ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಬಳಿ ಬೆಳ್ಮಣ್–ಕಿನ್ನಿಗೋಳಿ ಸಾರ್ವಜನಿಕ ಡಾಂಬರು ರಸ್ತೆಯಲ್ಲಿ ಎರಡು ಮೋಟಾರ್ ಸೈಕಲ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡ ಘಟನೆ ಏಪ್ರಿಲ್ 23ರಂದು ನಡೆದಿದೆ.
ಕಿನ್ನಿಗೋಳಿ ಕಡೆಯಿಂದ ಬೆಳ್ಮಣ್ ಕಡೆಗೆ ಸಾಗುತ್ತಿದ್ದ ಅಮರನಾಥ್ ಅವರ ಮೋಟಾರ್ ಸೈಕಲ್, ಬೆಳ್ಮಣ್‌ನಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ರಮೇಶ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.
ಘಟನೆಯ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
