ಕಾರ್ಕಳ: ಸಾಣೂರು ಮುದ್ದಣನಗರ ನಡ್ಯೋಡಿಬೆಟ್ಟದ ಧರ್ಮರಸು ಕೊಡಮಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ಗರಡಿಯ ಪುನರ್ ಪ್ರತಿಷ್ಟೆ, ಬ್ರಹ್ಮಕಲಶಾಭಿಷೇಕ, ಧಾರ್ಮಿಕ ಸಭೆ ಹಾಗೂ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ನಡೆಯಿತು. ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಮಾ.23ರಿಂದ 31ರ ವರೆಗೆ ಜರುಗಲಿದೆ. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶ್ರೀರಾಮ ಭಟ್, ಪ್ರಧಾನ ಕಾರ್ಯದರ್ಶಿ ಕರುಣಾಕರ್ ಕೋಟ್ಯಾನ್, ಸಾಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಯುವರಾಜ್ ಜೈನ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಭಾತ್ ನಾಯ್ಕ್, ಕೋಶಾಧಿಕಾರಿ ಎಂ. ದಯಾನಂದ ಶೆಟ್ಟಿ, ವಿಶಾಲ್ ಪೂಜಾರಿ ಖಂಡಿಗ ಬರ್ಕೆ, ಸುಂದರ್ ಶೆಟ್ಟಿ ಧರ್ಮಡ್ಕ, ಪ್ರಚಾರ ಮತ್ತು ಮಾಧ್ಯಮ ಸಮಿತಿ ಸಂಚಾಲಕ ಮೋಹನ್ ಶೆಟ್ಟಿ ಸಾಣೂರು, ಗುತ್ತು ಬರ್ಕೆಗಳ ಪ್ರಮುಖರು, ನಾನಾ ಸಮಿತಿಗಳ ಸಂಚಾಲಕರು, ಸಹ ಸಂಚಾಲಕರು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.