Saturday, February 15, 2025
Homeಕಾರ್ಕಳಕಾರ್ಕಳ ಸಾಮೂಹಿಕ ಅತ್ಯಾಚಾರ ಕೇಸ್‌ | ಇನ್ನಿಬ್ಬರ ಬಂಧನ; ತಿರುಪತಿವರೆಗೆ ಇದೆ ಡ್ರಗ್‌ ಸಪ್ಲೈ ಕನೆಕ್ಷನ್

ಕಾರ್ಕಳ ಸಾಮೂಹಿಕ ಅತ್ಯಾಚಾರ ಕೇಸ್‌ | ಇನ್ನಿಬ್ಬರ ಬಂಧನ; ತಿರುಪತಿವರೆಗೆ ಇದೆ ಡ್ರಗ್‌ ಸಪ್ಲೈ ಕನೆಕ್ಷನ್

ಕಾರ್ಕಳ: ಕಳೆದ ಕೆಲವು ದಿನಗಳ ಹಿಂದೆ ಇಲ್ಲಿನ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಐದಕ್ಕೇರಿದೆ.
ಬಂಧಿತರನ್ನು ಸಿಯಾಜ್‌ ಮತ್ತು ಗಿರಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸಿಯಾಜ್‌ ಕಾರ್ಕಳದವನಾದರೆ, ಗಿರಿ ಆಂಧ್ರಪ್ರದೇಶದವನು ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರಮುಖ ಆರೋಪಿ ಅಲ್ತಾಫ್‌ಗೆ ಡ್ರಗ್‌ ಪೂರೈಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇಬ್ಬರು ಆರೋಪಿಗಳನ್ನು ಪೊಲೀಸರು ಎರಡು ದಿನಗಳ ಹಿಂದೆಯೇ ವಶಕ್ಕೆ ಪಡೆದಿದ್ದರು. ಆದರೆ ಈಗ ಪ್ರಾಥಮಿಕ ತನಿಖೆಯ ಬಳಿಕ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಸ್ಟಡಿಗೆ ಪಡೆದಿದ್ದಾರೆ.
ಯುವತಿಗೆ ನೀಡಲಾದ ಡ್ರಗ್ಸ್‌ ಮೂಲದ ಬಗ್ಗೆ ತನಿಖೆಯನ್ನು ತೀವ್ರಗೊಳಿಸಲಾಗಿತ್ತು. ಅದು ಬೆಂಗಳೂರು, ತಿರುಪತಿಯಿಂದ ಸರಬರಾಜು ಆಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಅಭಯ್‌ ಹಾಗೂ ಇಬ್ಬರು ಬಂಧಿತರನ್ನು ಪೊಲೀಸರು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದು ತನಿಖೆ ನಡೆಸಿದ್ದರು.

RELATED ARTICLES
- Advertisment -
Google search engine

Most Popular