ಕಾರ್ಕಳ: ಶಾಲಾ ಶೈಕ್ಷಣಿಕ ಪ್ರವಾಸದಲ್ಲಿದ್ದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ,ಕಂಬೀಪುರ ಕೆಂಗೇರಿ ಬೆಂಗಳೂರು ಇಲ್ಲಿನ ವಿದ್ಯಾರ್ಥಿಗಳು ಕಾರ್ಕಳ ರೋಟರಿ ಕ್ಲಬ್ಬಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಳೊಂದಿಗೆ ಸಂವಾದದ ಮೂಲಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಲಾಯಿತು. ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ ಸಂಪನ್ಮೂಲ ವ್ಯಕ್ತಿಯಾಗಿ ಸಹಕರಿಸಿದರು.
ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಎಲ್ಲರನ್ನು ಸ್ವಾಗತಿಸಿ ರೋಟರಿ ಬಗ್ಗೆ ಮಾಹಿತಿ ನೀಡಿದರು.
ನಿಕಟಪೂರ್ವ ಅಧ್ಯಕ್ಷ ಇಕ್ಬಾಲ್ ಅಹಮದ್ ಅವರ ಸಹಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಭೋಜನದ ವ್ಯವಸ್ಥೆ ಮಾಡಲಾಯಿತು.
ಮುಖ್ಯ ಶಿಕ್ಷಕಿ ಸುಪ್ರೀತಾ ಶೆಟ್ಟಿ ಅವರು ರೋಟರಿ ರೋಟರಿಯ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಅರ್ಪಿಸಿದರು.
ಕಾರ್ಯದರ್ಶಿ ಚೇತನ್ ನಾಯಕ್, ಹರಿಪ್ರಕಾಶ್ ಶೆಟ್ಟಿ, ವಿಜೇಂದ್ರ ಕುಮಾರ್ ಪದ್ಮಪ್ರಸಾದ್ ಜೈನ್, ರವೀಂದ್ರ ಮೋಯಿಲಿ ಉಪಸ್ಥಿತರಿದ್ದರು.

