ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ, ರೋಟರಾಕ್ಟ್ ಕ್ಲಬ್ ಕಾರ್ಕಳ ಮತ್ತು ಎಂ. ಪಿ. ಯಂ. ಕಾಲೇಜು ರೋಟ್ರಾಕ್ಟ್ ಕ್ಲಬ್ , ಕಾರ್ಕಳ ಜ್ಞಾನಸುಧಾ ಕಾಲೇಜಿನ ಎನ್. ಎಸ್. ಎಸ್. ಘಟಕ ಹಾಗೂ ಸ್ವಚ್ಛ ಕಾರ್ಕಳ ಬ್ರಿಗೇಡ್ ನ ಆಶ್ರಯದಲ್ಲಿ“ ವಾಜಪೇಯಿ ಪಾರ್ಕ್ ನ ಸ್ವಚ್ಛತಾ ಕಾರ್ಯಕ್ರಮ”ವು ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ವಿದ್ಯಾರ್ಥಿಗಳಲ್ಲಿ ಎಳವೆಯಲ್ಲಿಯೇ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಜ್ಞಾನ ಸುಧಾ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಸ್ವಚ್ಛ ಪರಿಸರದ ಮಹತ್ವದ ಬಗ್ಗೆ ಮಾಹಿತಿ ನೀಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.