ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

0
19

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಉಡುಪಿ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಕಳ ಮತ್ತು ಕುಂದಾಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನನ್ನ ಬಾಲ್ಯ ನನ್ನ ಹಕ್ಕು ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.

ಮಾನ್ಯ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರು ಹಾಗೂ ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಗೀತಾ ಡಿ ಉದ್ಘಾಟಿಸಿ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಶ್ವೇತ ವಿಪುಲ್ ತೇಜ್ ನ್ಯಾಯಾಧೀಶರು ಕಾರ್ಕಳ ಇವರು ಪೋಕ್ಸೊ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಲೀಗಲ್ ಸರ್ವಿಸ್ ಕಮಿಟಿಯ ಆಡಳಿತ ಸಹಾಯಕಿ ಜ್ಯೋತಿ, ಶಾಲಾ ವಿದ್ಯಾರ್ಥಿ ನಾಯಕ ಅಂಕುಶ್, ಉಪನಾಯಕಿ ಮನಸ್ವಿ, ಶಿಕ್ಷಕಿಯರಾದ ವಾಣಿ ಹಾಗೂ ಅಶ್ವಿನಿ, ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ ವಹಿಸಿದ್ದರು. ಸಹ ಶಿಕ್ಷಕಿಯಾದ ಸವಿತಾ ಪ್ರಭು ನಿರೂಪಿಸಿದರು. ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಮಧುಶ್ರೀ ವಂದಿಸಿದರು.