ಕಾರ್ಕಳ: ಕಾರ್ಕಳ ಪುರಸಭೆಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಯೋಗೀಶ್ ದೇವಾಡಿಗ ಬಿಜೆಪಿಯ ಹಿರಿಯ ಸದಸ್ಯರಾಗಿದ್ದು, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಬಿಜೆಪಿ ಅಭ್ಯರ್ಥಿ ಯೋಗೀಶ್ ದೇವಾಡಿಗ ಅಧ್ಯಕ್ಷ ಸ್ಥಾನಕ್ಕೆ 13 ಮತ ಪಡೆದರು. ಕಾಂಗ್ರೆಸ್ ಅಭ್ಯರ್ಥಿ ಶುಭದ ರಾವ್ 11 ಮತ ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರಶಾಂತ್ ಕೋಟ್ಯಾನ್ 13 ಮತ ಪಡೆದರು, ಕಾಂಗ್ರೆಸ್ ಅಭ್ಯರ್ಥಿ ವಿನ್ನಿ ಬೋಲ್ಡ್ ಮೆನ್ಡಾನ್ಕಾ 11 ಮತ ಪಡೆದರು.
23 ಸದಸ್ಯರ ಪೈಕಿ ಬಿಜೆಪಿ, ಕಾಂಗ್ರೆಸ್ ತಲಾ 11 ಸದಸ್ಯ ಬಲ ಹೊಂದಿದ್ದು, ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಶಾಸಕ ಸುನಿಲ್ ಕುಮೃ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ ಸೇರಿ ಬಿಜೆಪಿ ಸದಸ್ಯ ಬಲ 13ಕ್ಕೇರಿತ್ತು. ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಗೈರು ಹಾಜರಾಗಿದ್ದರು.