ಕಾರ್ಕಳ : ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು

0
127

ಬೃಹತ್ ಗಾತ್ರದ ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ. ಯುವಕ 11 ಮೀಟರ್ ಎತ್ತರದ ಬೃಹತ್ ವಿದ್ಯುತ್ ಕಂಬವನ್ನು ಏರಿದ್ದ. ಈ ವೇಳೆ ಮಳೆ ಸುರಿಯುತ್ತಿದ್ದು, ಜೊತೆಗೆ ಸಿಡಿಲು ಬಡಿದ ಆಘಾತದಿಂದಾಗಿ ಯುವಕ ಕೆಳಕ್ಕೆ ಬಿದ್ದು, ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಅಸ್ಸಾಂ ಮೂಲದವನೆಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

LEAVE A REPLY

Please enter your comment!
Please enter your name here