ಮುಲ್ಕಿ: ಇಲ್ಲಿನ ಅಚ್ಚು ನಂದನ್ ರೆಸಿಡೆನ್ಸಿಯಲ್ಲಿ ವಾಸ್ತವ್ಯವಿದ್ದ ಮೂಲತಃ ಕಾರ್ನಾಡ್ ಹರಿಹರ ಕ್ಷೇತ್ರದ ಬಳಿಯ ನಿವಾಸಿ ಚೆನ್ನಪ್ಪ ಸಾಲ್ಯಾನ್(75)( ಸಿ.ಟಿ. ಸಾಲ್ಯಾನ್) ರವರು ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.
ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅವರು ಪ್ರತಿಷ್ಠಿತ ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾಗಿ , ಮುಂಬೈ ಬಿಲ್ಲವರ ಎಸೋಸಿಯೇಷನ್ ನ ಉಪಾಧ್ಯಕ್ಷರಾಗಿ, ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಉಮಾನಾಥ ಕೋಟ್ಯಾನ್ , ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್, ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಯೋಗೀಶ್ ಕೋಟ್ಯಾನ್ ಚಿತ್ರಾಪು ತಾರಾನಾಥ ಸುವರ್ಣ ಅಡ್ವೆ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಡಾ ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬೆರ್ನಾಡ್,ಮಾಧವ ಪೂಜಾರಿ ಕೆಂಪುಗುಡ್ಡೆ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.