Saturday, April 19, 2025
Homeಬೆಂಗಳೂರುಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ

ಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ

ಬೆಂಗಳೂರು: ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಂಗಳವಾರ ಮಧ್ಯಾಹ್ನ ಮತ್ತಿಕೆರಯ ಮನೆಯಲ್ಲಿ ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂತರ, ಸಾವಿನ ಸ್ಥಳವನ್ನು ಪರಿಶೀಲನೆ ಮಾಡಿದಾಗ ಪೊಲೀಸರಿಗೆ ಮಂಜುಳಾ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದ್ದು, ಈ ಬಗ್ಗೆ ತನಿಖೆ ನಡೆಸಿದ್ದಾರೆ.ಇನ್ನು ಮಂಜುಳಾ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್ ನೋಟ್‌ ಬರೆದಿಟ್ಟಿದ್ದು, ಜೀವನದಲ್ಲಿ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಲ್ಲೇಖ ಮಾಡಿದ್ದಾರಂತೆ. ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular