Saturday, September 14, 2024
Homeಮಂಗಳೂರುಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ: ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ: ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ


ಉಜಿರೆ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.
ಅವರು ಶನಿವಾರ ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಪ್ರಕಟಿಸಿದರು.
ಸಂಘದ ಹಿರಿಯ ಸದಸ್ಯರುಗಳಾದ ಎಂ.ಕೆ. ಆರಿಗ, ಮಹಾಬಲ ಹೆಗ್ಡೆ, ಲಲಿತ, ಬಾಬುಗೌಡ, ಆಗ್ನೇಸ್ ಡೇಸಾ, ದೇವಪ್ಪ ಗೌಡ, ಪ್ರೊ. ಕೆ. ವಿಷ್ಣುಮೂರ್ತಿ ಭಟ್, ವಿಕ್ಟರ್ ಮೊರಾಸ್, ನಿವೃತ್ತ ಉಪನ್ಯಾಸ ಸುಬ್ರಹ್ಮಣ್ಯ ಮಧ್ಯಸ್ತ, ಸೋಮನಾಥ ಮಯ್ಯ ಅಳದಂಗಡಿ, ಜುಲಿಯಾನಾ ಲೋಬೊ, ಪ್ರೊ. ಉದಯಕುಮಾರ ಮಲ್ಲ, ಬೆಳ್ತಂಗಡಿ, ಬಾಬು ಪೂಜಾರಿ ಕೆದ್ದು, ರಾಮ ಕಾರಂತ, ಉಜಿರೆ, ಬಾಬು ಗೌಡ, ಮುಂಡಾಜೆ ಮೊದಲಾದರನ್ನು ಗೌರವಿಸಲಾಯಿತು. ಇತ್ತೀಚೆಗೆ ನಿಧನರಾದ ಪ್ರೊ. ನಾ’ ವುಜಿರೆ ಅವರಿಗೆ ಆರ್.ಯನ್. ಪೂವಣಿ ಹಾಗೂ ನಿವೃತ್ತ ಶಿಕ್ಷಕ ಜಯರಾಜ ಕಾಡ, ಕುತ್ಲೂರು ಅವರಿಗೆ ವಸಂತರಾವ್ ನುಡಿನಮನ ಸಲ್ಲಿಸಿದರು.ಕೋಶಾಧಿಕಾರಿ ಜಗನ್ನಿವಾಸ ರಾವ್ ಮತ್ತು ಉಪಾಧ್ಯಕ್ಷರಾದ ಕುಸುಮಾವತಿ ಉಪಸ್ಥಿತರಿದ್ದರು.ಕಾರ್ಯದರ್ಶಿ ಪದ್ಮಕುಮಾರ್ ವರದಿ ಸಾದರಪಡಿಸಿದರು. ಸಂಘದ ಉಪಾಧ್ಯಕ್ಷ ಸನ್ಮತ್ ಕುಮರ್ ನಾರಾವಿ ಸ್ವಾಗತಿಸಿದರು. ಪದ್ಮಕುಮಾರ್ ಧನ್ಯವಾದವಿತ್ತರು.

ನೂತನ ಪದಾಧಿಕಾರಿಗಳ ಆಯ್ಕೆ:
ಮೂರುವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು.
ಬಿ. ವಿಠಲ ಶೆಟ್ಟಿ (ಅಧ್ಯಕ್ಷರು), ಸನ್ಮತ್ ಕುಮಾರ್ ಮತ್ತು ಕುಸುಮಾವತಿ (ಉಪಾಧ್ಯಕ್ಷರು) ವಿಶ್ವಾಸ್ ರಾವ್ ಉಜಿರೆ (ಕಾರ್ಯದರ್ಶಿ), ವಾರಿಜ (ಜೊತೆ ಕಾರ್ಯದರ್ಶಿ) ಜಗನ್ನಿವಾಸ ರಾವ್ (ಕೋಶಾಧಿಕಾರಿ)

RELATED ARTICLES
- Advertisment -
Google search engine

Most Popular