ಜು.25ರಂದು ಅಳದಂಗಡಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಆಟಿದ ಗೊಬ್ಬು ಹಾಗೂ ವಾರ್ಷಿಕ ಸಭೆ

0
31

ಅಳದಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಅಳದಂಗಡಿ ವಲಯ ಸಮಿತಿಯ ಆಶ್ರಯದಲ್ಲಿ ಆಟಿದ ಗೊಬ್ಬು ಹಾಗೂ ವಾರ್ಷಿಕ ಸಭೆ ಜುಲೈ 25ರಂದು (ಶನಿವಾರ) ಅಳದಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 12 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಅಳದಂಗಡಿ ವಲಯ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.