ದಾವಣಗೆರೆ:ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚಿಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ವಾಮದೇವಪ್ಪನವರಿಗೆ ಜನ್ನದಿನದ ವಜ್ರಮಹೋತ್ಸವ ಹಾಗೂ ಇತ್ತೀಚಿಗೆ ಹರಿಹರದಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ೧೩ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳದ ಪ್ರಯುಕ್ತ ನಿರಂತರವಾಗಿ ಕನ್ನಡ ನಾಡು, ನುಡಿ ಸೇವೆಯನ್ನು ಪರಿಗಣಿಸಿ “ಕರ್ನಾಟಕ ಸುವರ್ಣ ಸಿರಿ” ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಕಲಾಕುಂಚ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ, ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ಸಂಸ್ಥೆಯ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಉಪಾಧ್ಯಕ್ಷರಾದ ಗಿರಿಜಮ್ಮ ನಾಗರಾಜಪ್ಪ, ಕಲಾಕುಂಚ ಪ್ರಧಾನ ಕಾರ್ಯದರ್ಶಿ ಶೈಲಾ ವಿಜಯಕುಮಾರ ಶೆಟ್ಟಿ, ಕಲಾಕುಂಚ ಸಿದ್ದವೀರಪ್ಪ ಬಡಾವಣೆ ಶಾಖೆಯ ಅಧ್ಯಕ್ಷರಾದ ಲಲಿತ ಕಲ್ಲೇಶ್, ಕಲಾಕುಂಚ ಸಹ ಕಾರ್ಯದರ್ಶಿ ಕೆ.ಸಿ. ಉಮೇಶ್, ಸಮಿತಿ ಸದಸ್ಯರಾದ ಶಾಂತಪ್ಪ ಪೂಜಾರಿ, ವಿದ್ಯಾ ಪರಮೇಶ್, ಸ್ವರ್ಣಲತಾ, ಸುಮಾ ಏಕಾಂತಪ್ಪ, ಆಶಾ ಲತಾ ಸತೀಶ್, ಡಿಸಿಎಂ ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿ ಕಾರ್ಯದರ್ಶಿ ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.