ಸಂಗೀತರ ಸಾಧನೆಗೆ ಕಸಾಪ ಉಡುಪಿ ತಾಲೂಕು ಗೌರವ ಪುರಸ್ಕಾರ

0
34

ಉಡುಪಿ : ನಿರಂತರ 25 ಗಂಟೆಗಳ ಕಾಲ ದಾಸ ಸಾಹಿತ್ಯದ ಗೀತೆಗಳನ್ನು ಹಾಡಿ ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಗೈದ ವಿದುಷಿ ಸಂಗೀತ ಬಾಲಚಂದ್ರ ಅವರನ್ನು ಇಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಪ್ರಭಾವತಿ ಶೆಣೈ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ., ಗೌರವ ಕಾರ್ಯ ದಶಿ೯ಗಳಾದ ಜನಾದ೯ನ್ ಕೊಡವೂರು, ರಂಜನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕವಾ೯ಲು, ದೀಪಾ ಚಂದ್ರಕಾಂತ್, ಸುಮಿತ್ರ ಭಟ್,ಮುಂತಾದರು ಉಪಸ್ಥಿತರಿದ್ದರು.