ಕಾಸರಗೋಡು : ಡಾ. ವಾಮನ್ ರಾವ್ ಬೇಕಲ್–ಸಂಧ್ಯಾ ರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರಾಯೋಜಕತ್ವದಲ್ಲಿ ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಸಹಭಾಗಿತ್ವದಲ್ಲಿ ಆಯೋಜಿಸಿರುವ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026ರ ಅಂಗವಾಗಿ ದಸರಾ ಕವಿಗೋಷ್ಠಿ ಅಕ್ಟೋಬರ್ 18ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ.
ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಿರಂತರ 10 ದಿನಗಳ ಕಾಲ ನಡೆಯಲಿರುವ ದಸರಾ ಸಾಂಸ್ಕೃತಿಕೋತ್ಸವದ ಅಂಗವಾಗಿ ಈ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕವಿಗೋಷ್ಠಿಯಲ್ಲಿ ಮೊದಲು ಹೆಸರು ನೋಂದಾಯಿಸುವ 51 ಕವಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು.
ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಭಕ್ತಿ ಪ್ರಧಾನ ಹಾಗೂ ಸ್ವಯಂ ರಚಿತ ಕವಿತೆಗಳನ್ನೇ ವಾಚಿಸಬೇಕು. ವಾಚಿಸಲಿರುವ ಕವಿತೆಯ ಒಂದು ಪ್ರತಿಯನ್ನು ಆಯೋಜಕರಿಗೆ ಸಲ್ಲಿಸಬೇಕು. ಕವಿಗೋಷ್ಠಿಯಲ್ಲಿ ವಾಚಿಸಲಾದ ಕವಿತೆಗಳನ್ನು ಒಳಗೊಂಡ ಪುಸ್ತಕವನ್ನು ಕನ್ನಡ ಭವನ ಪ್ರಕಾಶನದ ವತಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು.
ಕವಿಗೋಷ್ಠಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕವಿಯನ್ನು ‘ಕಾಸರಗೋಡು ದಸರಾ ಸಾಧಕ ಸನ್ಮಾನ’, ಅಭಿನಂದನಾ ಗೌರವ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಗುವುದು.
ಆಸಕ್ತ ಕವಿಗಳು 9037173400 ಅಥವಾ 9746093552 ಸಂಖ್ಯೆಗೆ ವಾಟ್ಸಪ್ ಮೂಲಕ ತಮ್ಮ ಹೆಸರು ಹಾಗೂ ಭಾವಚಿತ್ರವನ್ನು ಕಳುಹಿಸಿ, ಬಳಿಕ ದೂರವಾಣಿ ಮೂಲಕ ನೋಂದಣಿ ಖಚಿತಪಡಿಸಿಕೊಳ್ಳುವಂತೆ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026 ಸಮಿತಿ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

