ಕಾಸರಗೋಡು : ಮಾ.28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ,ಬಹು ಭಾಷಾ ಕವಿಗೋಷ್ಠಿ , ಚುಟುಕು ಕವಿ ಗೋಷ್ಠಿ, ಮಕ್ಕಳ ಕವಿ ಗೋಷ್ಠಿಗೆ ಆಹ್ವಾನ

0
7

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ರಚನಾತ್ಮಕವಾಗಿ ಚುಟುಕು ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡಿರುತ್ತದೆ.

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ. ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ 2026 ಮಾರ್ಚ್ 28 ಶನಿವಾರದಂದು ಅಪರಾಹ್ನ ಗಂಟೆ 3.00 ಕ್ಕೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಬಹುಭಾಷಾ ಕವಿ ಗೋಷ್ಠಿ, ಚುಟುಕು ಕವಿಗೋಷ್ಠಿ ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

ಕಾಸರಗೋಡು ಜಿಲ್ಲೆಯ ಹಿರಿಯ, ಕಿರಿಯ ಕವಿ, ಕವಯತ್ರಿಯರು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಚುಟುಕುಗಳು, ಕವನಗಳು, ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ.

ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಶಿವರಾಮ ಕಾಸರಗೋಡು, ಅಧ್ಯಕ್ಷರು,ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ , ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ,ಕನ್ನಡ ಗ್ರಾಮ, ಗ್ರಾಮರಸ್ತೆ, ಕಾಸರಗೋಡು-671121

LEAVE A REPLY

Please enter your comment!
Please enter your name here