ಮುಲ್ಕಿ:ಕಾಶ್ಮೀರ ರಾಜ್ಯದ ಪೆಹಲ್ಗಾಂ ಪ್ರವಾಸಿ ತಾಣಕ್ಕೆ ಬೇಟಿ ನೀಡಿದ ನಾಗರಿಕರ ಮೇಲೆ ಭಯೋತ್ಪಾದಕ ದಾಳಿಯನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಅಂತರಾಷ್ಟ್ರೀಯ ವಾಸ್ತುತಜ್ಞ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯಾವರು ತೀವ್ರವಾಗಿ ಖಂಡಿಸಿದ್ದಾರೆ.
ಅವರು ಮಾಧ್ಯಮ ಹೇಳಿಕೆ ನೀಡಿ ನಾಗರಿಕರ ಮೇಲೆ ಭಯೋತ್ಪಾದಕ ದಾಳಿ ಅಮಾನವೀಯ ಕೃತ್ಯವಾಗಿದ್ದು
ಭಯೋತ್ಪಾದಕರ ಹುಟ್ಟಡಗಿಸಲು ಸರಕಾರ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಬೇಕು
ಪ್ರಜೆಗಳಿಗೆ ಸುರಕ್ಷತೆ ನೀಡ ಬೇಕಾದದ್ದು ಸರಕಾರಗಳ ಆದ್ಯ ಕರ್ತವ್ಯವಾಗಿದ್ದು ಗುಪ್ತಚರ ಇಲಾಖೆಯ ವೈಫಲ್ಯ ಘಟನೆಗೆ ಕಾರಣವಾಗಿದೆ.
ಘಟನೆಯ ಹಿಂದಿರುವ ಕ್ಷುದ್ರ ಶಕ್ತಿಯನ್ನು ಪತ್ತೆ ಹಚ್ಚಿ ಮೂಲವನ್ನು ನಾಶ ಮಾಡಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.