ಮಂಗಳೂರು: ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ಕಥಾಬಿಂದು ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವನ್ನು ಆಗಸ್ಟ್ 16ರಂದು ಮುಡಿಪಿನಲ್ಲಿ ಆಯೋಜಿಸಲಾಗಿದೆ.
ಮುಡಿಪಿನ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕವಿಗೋಷ್ಠಿ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿಗಳಾದ ‘ಶಿಕ್ಷಕರತ್ನ’, ‘ಸಾಹಿತ್ಯರತ್ನ’ ಹಾಗೂ ‘ಚೈತನ್ಯ ಶ್ರೀ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಇದೇ ಸಂದರ್ಭದಲ್ಲಿ ಗಡಿನಾಡು ಕಾಸರಗೋಡಿನ ಕನ್ನಡ ಭವನದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ ರಾಣಿ ಟೀಚರ್ ಅವರಿಗೆ ‘ಚೈತನ್ಯ ಶ್ರೀ’ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

