ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕಾರ‍್ಯಕ್ರಮ ನಾಳೆ ಆ.26 ರಂದು ನಡೆಯಲಿದೆ.
ಕಾಟಿಪಳ್ಳದ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ‍್ಯಕ್ರಮವನ್ನು ಬೆಳಿಗ್ಗೆ 10 ಗಂಟೆಗೆ ಮಕ್ಕಳ ಸಾಹಿತಿ ಮತ್ತು ಲೇಖಕರಾದ ನಾರಾಯಣ ರೈ ಕುಕ್ಕುವಳ್ಳಿ ಅವರು ಉದ್ಘಾಟಿಸಿ, ದಿಕ್ಸೂಚಿ ಮಾತನ್ನಾಡುವರು. ಮುಖ್ಯ ಅತಿಥಿಯಾಗಿ ಬ್ರಹ್ಮ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಭಾಗವಹಿಸುವರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್, ಕನ್ನಡ ಭಾಷಾ ಶಿಕ್ಷಕಿ ಅಕ್ಷತಾ ಕೇಶವ್ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.