ಕಾಟಿಪಳ್ಳ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ, ಮೂರನೇ ವಿಭಾಗ, ಕಾಟಿಪಳ್ಳದಲ್ಲಿ ಹೆಚ್ ಪಿ ಸಿ ಎಲ್ ಬಾಟ್ಲಿಂಗ್ ಘಟಕ ಬಾಳ ಇವರ ವತಿಯಿಂದ ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಬಗ್ಗೆ ಹೆಚ್ ಪಿ ಸಿ ಎಲ್ ನ ವಲಯ ಅಧಿಕಾರಿಯಾದ ಆದಿತ್ಯನ್ ರವರು ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿ ಒದಗಿಸಿದರು. ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ ಚಿತ್ರ ಕಲೆ ಸ್ಪರ್ಧೆಯನ್ನು ಏರ್ಪಡಿಸಿ ಅದರಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು. ಆಪರೇಷನ್ ವಿಭಾಗದ ಪ್ರಬಂಧಕರಾದ ಶ್ರೀ ರಾಹುಲ್ ಮಕ್ಕಳ ವಿದ್ಯಾಭ್ಯಾಸ ಹಾಗೂ ಪರಿಸರ ಸಂರಕ್ಷಣೆ ಮತ್ತು ನೈರ್ಮಲ್ಯದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಆಡಳಿತ ಮಂಡಳಿಗೆ ಸ್ವಚ್ಛತೆಯ ಪರಿಕರ ಹಾಗೂ ಸಾಮಗ್ರಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಲಕ್ಷ್ಮಿ ಶೆಟ್ಟಿಯವರು ಮತ್ತು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಆಚಾರ್, ಗೌರವ ಅಧ್ಯಕ್ಷರಾದ ಶ್ರೀ ಲಕ್ಷ್ಮ್ಣಣ ಆಚಾರ್ ಮತ್ತು ಶ್ರೀ ಗುರುಪ್ರಸಾದ್ ಹೊಳ್ಳ ಉಪಸ್ಥಿತರಿದ್ದರು.
ಎಸ್. ವಿ.ಎಸ್. ಸರ್ವಿಸಸ್ ನ ಮಾಲಕರಾದ ಶ್ರೀ ಶ್ರೀನಿವಾಸ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ದೇವಿಕಿರಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕಿ ಶ್ರೀಮತಿ ಇಂದಿರಾ ರವರು ಸ್ವಾಗತಿಸಿದರು. ಶ್ರೀಮತಿ ಶಕುಂತಳಾರವರು ಧನ್ಯವಾದ ಸಮರ್ಪಿಸಿದರು.