ಕಟ್ಟಿಂಗೇರಿ: ಬೆಳ್ಳೆ ಶಕ್ತಿ ಕೇಂದ್ರದ ಸಭೆ ದಿನಾಂಕ 05-04-2024 ರಂದು ಗೀತಾ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಘರ್ ಘರ್ ಪಾನಿ ಪ್ರತಿ ಮನೆ ಮನೆಗೂ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಜಾರಿಗೆ ತಂದಿದ್ದು ಇದರ ಅಡಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಮೋದಿ ಅವರು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ್ ವಾಗ್ಲೆ, ಕಟ್ಟಿಂಗೇರಿ ಶಕ್ತಿ ಕೇಂದ್ರದ ಸಂಚಾಲಕರಾದ ಗುರುರಾಜ್ ಭಟ್, ಬೆಳ್ಳೆ ಶಕ್ತಿ ಕೇಂದ್ರದ ಸಂಚಾಲಕರಾದ ಸುಧಾಕರ್ ಪೂಜಾರಿ, ಸಹ ಸಂಚಾಲಕರಾದ ರಂಜನ್ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.