ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 03-12-2025 ರಂದು ಕಾಪು ಪ್ರಜಾಸೌಧ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43 ಅರ್ಜಿಗಳನ್ನು ಸ್ವೀಕರಿಸಿ ಕೆಲವು ಅರ್ಜಿಗಳನ್ನು ಸಕ್ಷಮ ಅಧಿಕಾರಿಗಳ ಎದುರಿನಲ್ಲಿ ಇತ್ಯರ್ಥ ಪಡಿಸಲಾಯಿತು. ಉಳಿದ ಅರ್ಜಿಗಳನ್ನು ತಾಂತ್ರಿಕ ಹಾಗೂ ದಾಖಲೆಗಳ ಸಮಸ್ಯೆಗಳಿರುವುದರಿಂದ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಪರಿಶೀಲನೆ ನಡೆಸಿ ಶೀಘ್ರ ವಿಲೇವಾರಿಗೊಳಿಸುವಂತೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಗಳಾದ ಶಶಿಕಲಾ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

