ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಹಗರಣವೊಂದರಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವೈದ್ಯಕೀಯ ನೆಲೆಯ ಜಾಮೀನು ಪಡೆಯುವ ಉದ್ದೇಶದಿಂದ ಡಯಾಬಿಟಿಸ್ ಹೊಂದಿದ್ದರೂ ಸಕ್ಕರೆ ಅಂಶವಿರುವ ಆಹಾರ ಹೆಚ್ಚಾಗಿ ತಿನ್ನುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಕೋರ್ಟಿಗೆ ತಿಳಿಸಿದೆ. ಸಕ್ಕರೆ ಅಂಶವಿರುವ ಮಾವಿನಹಣ್ಣು, ಆಲೂ ಪೂರಿ ಹಾಗೂ ಸಿಹಿ ತಿಂಡಿಗಳನ್ನು ಅವರು ಸೇವಿಸುತ್ತಿದ್ದಾರೆ ಎಂದು ಈಡಿ ಗುರುವಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಈಡಿ ಹಾಗೂ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಎದುರು ಈಡಿ ಅಧಿಕಾರಿಗಳು ಈ ವಿಚಾರ ತಿಳಿಸಿದೆ. ವಿಷಯಕ್ಕೆ ಸಂಬಂಧಿಸಿ ಕೇಜ್ರಿವಾಲ್ ಅವರ ಡಯಟ್ ಚಾರ್ಟ್ ಸೇರಿದಂತೆ ಇತರೆ ಅಂಶಗಳನ್ನು ಸಲ್ಲಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ. ಶುಗರ್ ಲೆವೆಲ್ ಏರುಪೇರಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಆಪ್ತ ವೈದ್ಯರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಲು ಅನುಮತಿ ಕೋರಿ ಕೇಜ್ರಿವಾಲ್ ನ್ಯಾಲಯಕ್ಕೆ ಮನವಿ ಮಾಡಿದ್ದಾರೆ.