ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಈ ಹಿಂದೆ ಬಂಧಿಸಿತ್ತು. ಸಿಬಿಐ ಬಂಧಿನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಈ ಹಿಂದೆ ಇದೇ ಪ್ರಕರಣದಲ್ಲಿ ಇಡಿ ಬಂಧಿಸಿದ್ದಾಗಲೂ ಸಹ ಸುಪ್ರೀಂ ಕೋರ್ಟ್ ಕೇಜ್ರಿವಾಲ್‌ಗೆ ಜಾಮೀನು ನೀಡಿತ್ತು.